ಬೆಂಗಳೂರು: ದಕ್ಷಿಣ ಭಾರತ ಹಾಗೂ ಕನ್ನಡದ ಹೆಸರಾಂತ ಚಲನಚಿತ್ರ ನಟ ಕಿಶೋರ್ ಕುಮಾರ್ ಜಿ ಅವರು 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಿಸಲಾಗಿದೆ.
ಈ ಕುರಿತು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು 2024-2025ನೇ ಸಾಲಿನಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2025ರ ಮಾರ್ಚ್ 1 ರಿಂದ 8ರ ವರೆಗೆ ಬೆಂಗಳೂರಿನಲ್ಲಿ ಆಯೋಜಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರ ಸಲುವಾಗಿ ಹಿಂದಿ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ನಟಿಸಿ ಜನ ಮನ್ನಣೆ ಪಡೆದಿರುವ ಕನ್ನಡದ ಖ್ಯಾತ ನಟಿ ಶ್ರೀ ಕಿಶೋರ್ ಕುಮಾರ್ ಜಿ ಇವರನ್ನು ಚಿತ್ರೋತ್ಸವದ 16ನೇ ಆವೃತ್ತಿಗೆ ರಾಯಭಾರಿಯಾಗಿ ನೇಮಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.