ಹೈದರಾಬಾದ್ : ಟಾಲಿವುಡ್ ಹಿರಿಯ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ (38) ಹೃದಯಾಘಾತದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ.
ಗಾಯಿತ್ರಿ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಹೈದರಾಬಾದ್ ನ AIG ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಳೆದ ತಿಂಗಳು ರಾಜೇಂದ್ರ ಪ್ರಸಾದ್ ಅವರ ಸಹೋದರ ಕೂಡ ಸಾವನ್ನಪ್ಪಿದ್ದರು. ವಿಜಯವಾಡದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ವೀರಭದ್ರಸ್ವಾಮಿ ಔಷಧ ನಿಯಂತ್ರಣ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು