ಕನ್ನಡ ಕಿರುತೆರೆಯ ನಟಿಸಿ ಫೇಸಮ್ ಆಗಿದ್ದ ನಟ ಶ್ರೀಧರ್ ನಾಯಕ್ ಅವರು ಮೇ 26ರ ತಡರಾತ್ರಿ ನಿಧನ ಹೊಂದಿದ್ದಾರೆ. ಇತ್ತೀಚೆಗೆ ಅವರಿಗೆ ತೀವ್ರ ಅನಾರೋಗ್ಯ ಕಾಡಿತ್ತು. ಅವರಿಗೆ ಸಹಾಯ ಮಾಡುವಂತೆ ಅನೇಕರು ಕೋರಿಕೊಂಡಿದ್ದರು.
ಈಗ ಶ್ರೀಧರ್ ಅವರು ಚಿಕಿತ್ಸೆ ಫಲಕಾರಿ ಆಗದೆ ಕೊನೆಯುಸಿರು ಎಳೆದಿದ್ದಾರೆ. ಬೆಂಗಳೂರಿನ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಅವರನ್ನು ಇಡಲಾಗಿದೆ. ಅವರಿಗೆ 47 ವರ್ಷ ವಯಸ್ಸಾಗಿತ್ತು.