ಚಿತ್ರದುರ್ಗ: ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಪರವಾಗಿ ನಟ ಸುದೀಪ್ ಬುಧವಾರ ರೋಡ್ ಶೋ ನಡೆಸಿ ಮತಯಾಚನೆ ಮಾಡಿದರು.
ಹೆಲಿಕಾಪ್ಟರ್ ಮೂಲಕ ಬೆಂಗಳೂರಿನಿಂದ ಮೊಳಕಾಲ್ಮುರು ಪಟ್ಟಣಕ್ಕೆ ಆಗಮಿಸಿದ ಸುದೀಪ್ ಅವರಿಗೆ ರೇಷ್ಮೆ ಶಾಲು, ಹೂಹಾರ ಹಾಕಿ ಅದ್ದೂರಿ ಸ್ವಾಗತ ಕೋರಲಾಯಿತು. ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳುವ ಕಾತುರದಿಂದ ಅಪಾರ ಅಭಿಮಾನಿಗಳು ಜಮಾಯಿಸಿದ್ದರು.
ಪಟ್ಟಣದ ತಾಲ್ಲೂಕು ಕಚೇರಿ ಸಮೀಪದಿಂದ ಆರಂಭವಾದ ರೋಡ್ ಶೋ ಬಸ್ ನಿಲ್ದಾಣದ ವರೆಗೆ ನಡೆಯಿತು. ಅಭಿಮಾಗಳತ್ತ ಕೈಬೀಸುತ್ತಿದ್ದಂತೆ ಜನರು ಜೈಕಾರ ಹಾಕಿ ಸಂಭ್ರಮಿಸಿದರು. ಬಿಜೆಪಿ ಅಭ್ಯರ್ಥಿ ಎಸ್.ತಿಪ್ಪೇಸ್ವಾಮಿ ಇದ್ದರು