ಮುಂಬೈ : ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ತಾಯಿಯಾಗುತ್ತಿರುವ ಸಂತಸದಲ್ಲಿದ್ದಾರೆ. ಇದೀಗ ಕಿಯಾರಾ ಅವರು ತಮ್ಮ ಬೇಬಿ ಬಂಪ್ ಜೊತೆ ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ನಡೆದ ಮೆಟ್ ಗಾಲಾದಲ್ಲಿ ಭಾಗಿಯಾಗಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವು ಕೂಡ ‘ಮೆಟ್ ಗಾಲಾ 2025’ ಫ್ಯಾಷನ್ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದೆ. ದೇಶ- ವಿದೇಶಗಳಿಂದ ಸೆಲೆಬ್ರಿಟಿಗಳು ಆಗಮಿಸುತ್ತಿರುವ ಈ ಕಾರ್ಯಕ್ರಮಕ್ಕೆ ಗರ್ಭಿಣಿ ಆಗಿರುವ ನಟಿ ಕಿಯಾರಾ ಕೂಡ ತೆರಳಿದ್ದಾರೆ.
ನ್ಯೂಯಾರ್ಕ್ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ನಲ್ಲಿ ‘ಮೆಟ್ ಗಾಲಾ’ ಫ್ಯಾಷನ್ ಹಬ್ಬ ನಡೆಯುತ್ತಿದೆ. ಇಲ್ಲಿನ ರೆಡ್ ಕಾರ್ಪೆಟ್‌ನಲ್ಲಿ ಕಿಯಾರಾ ಬೇಬಿ ಬಂಪ್‌ನೊಂದಿಗೆ ಹೆಜ್ಜೆ ಹಾಕಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಕಪ್ಪು ಬಣ್ಣದ ಗೌನ್‌ಗೆ ಗೋಲ್ಡನ್ ಕಲರ್ ವಿನ್ಯಾಸವಿರುವ ಉಡುಪಿನಲ್ಲಿ ಕಿಯಾರಾ ಎಲ್ಲರ ಗಮನ ಸೆಳೆದಿದ್ದಾರೆ. ಇನ್ನು ರೆಡ್ ಕಾರ್ಪೆಟ್‌ನಲ್ಲಿ ಸ್ಟೈಲಿಶ್ ಆಗಿ ಹೆಜ್ಜೆ ಹಾಕಿದ ಅವರ ಫೋಟೋಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.