ಬೆಂಗಳೂರು : ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ರನ್ಯಾ ರಾವ್ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿದ್ದರು. ಸದ್ಯ, ನಟಿ ರನ್ಯಾ ರಾವ್ ಪರಪ್ಪನ ಅಗ್ರಹಾದಲ್ಲಿದ್ದಾರೆ.
ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ರನ್ಯಾ ರಾವ್ ಜಾಮೀನು ಕೋರಿ 64 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಹಲವು ಕಾರಣಗಳನ್ನು ನೀಡಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ, ರನ್ಯಾ ರಾವ್ ಪರ ವಕೀಲರು ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ. ನಟಿ ರನ್ಯಾ ರಾವ್ಗೆ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.