ಹೈದರಾಬಾದ್: ಅನೇಕ ತಿಂಗಳಿಂದ ಹರಿದಾಡುತ್ತಿದ್ದ ಗುಸು ಗುಸು ನಿಜವಾಗಿದೆ. ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮತ್ತು ಖ್ಯಾತ ನಟ ವಿಜಯ್ ದೇವರಕೊಂಡ ಇಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.!
ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಶುಕ್ರವಾರ ರಶ್ಮಿಕಾ ಮಂದಣ್ಣ -ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 2018ರಲ್ಲಿ ಬಿಡುಗಡೆಯಾಗಿದ್ದ ತೆಲುಗು ಚಿತ್ರ ‘ಗೀತಾ ಗೋವಿಂದಂ’ನಲ್ಲಿ ಅವರು ಒಟ್ಟಿಗೆ ನಟಿಸಿದ್ದರು. ನಂತರ ಅನೇಕ ಚಿತ್ರಗಳಲ್ಲಿ ನಟಿಸಿದ್ದ ಅವರು ಒಟ್ಟಿಗೆ ಕಾಣಿಸಿಕೊಂಡಿದ್ದು ಪ್ರೀತಿಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಶುಕ್ರವಾರ ನಿಶ್ಚಿತಾರ್ಥ ಮಾಡಿಕೊಂಡಿದ್ದು ಫೆಬ್ರವರಿಯಲ್ಲಿ ಮದುವೆ ನೆರವೇರಲಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ರಶ್ಮಿಕಾ ಅಥವಾ ವಿಜಯ್ ಅಧಿಕೃತವಾಗಿ ಮಾಹಿತಿ ನೀಡಿಲ್ಲ.