ಬೆಂಗಳೂರು : ಇತ್ತೀಚಿನ ವರ್ಷಗಳಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ನೀಡುತ್ತ, ಅತ್ಯಂತ ಯಶಸ್ವಿ ನಟಿಯಾಗಿ ಗುರುತಿಸಿಕೊಂಡಿರುವ ರಶ್ಮಿಕಾ ಮಂದಣ್ಣ ಇದೀಗ ಐಶಾರಾಮಿ ಕಾರೊಂದನ್ನು ಖರೀದಿಸಿದ್ದಾರೆ.
ರಶ್ಮಿಕಾ ಮಂದಣ್ಣ ಕಪ್ಪು ಬಣ್ಣದ ಮರ್ಸಿಡೀಸ್ ಎಸ್ 450 ಕಾರನ್ನು ಖರೀದಿಸಿದ್ದಾರೆ. ಈ ಕಾರಿನ ಬೆಲೆ ಸುಮಾರು 2.25 ಕೋಟಿ ರೂಪಾಯಿ ಆಗಿದೆ.
ರಶ್ಮಿಕಾ ಮಂದಣ್ಣ ಖರೀದಿಸಿರುವ ಮರ್ಸಿಡೀಸ್ ಎಸ್ 450 ಕಾರು ಸೆಡಾನ್ ಮಾದರಿಯದ್ದಾಗಿದೆ. ಈ ಐಶಾರಾಮಿ ಕಾರಿನಲ್ಲಿ ಹಲವು ಅತ್ಯುತ್ತಮ ಸೌಲಭ್ಯಗಳು, ಸೌಕರ್ಯಗಳು ಹಾಗೂ ಸೇಫ್ಟಿ ಫೀಚರ್ಸ್ ಬರುತ್ತವೆ.
ಇತ್ತೀಚೆಗೆ ರಶ್ಮಿಕಾ ನಟಿಸಿರುವ ಮೂರು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಕಲೆಕ್ಷನ್ ಮಾಡಿದೆ. ಈ ಮೂರು ಸಿನಿಮಾಗಳ ಒಟ್ಟು ಬಾಕ್ಸ್ ಆಫೀಸ್ ಕಲೆಕ್ಷನ್ ಮೂರು ಸಾವಿರ ಕೋಟಿ. ಹೀಗೆ ಬ್ಯಾಟ್ ಟು ಬ್ಯಾಕ್ ಹಿಟ್ ಸಿನಿಮಾ ನೀಡಿದ ಬೆನ್ನಲ್ಲೇ ರಶ್ಮಿಕಾ ಅವರ ಸಂಭಾವನೆಯೂ ಹೆಚ್ಚಳವಾಗಿದೆ. ಅದಕ್ಕೆ ತಕ್ಕಂತೆ ರಶ್ಮಿಕಾ ಅವರ ಜೀವನಶೈಲಿಯೂ ಬದಲಾಗಿದೆ.