ಕಳೆದ ಕೆಲವು ವರ್ಷಗಳಿಂದ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾ ಹಲವು ಬಾರಿ ವಿವಾದಗಳಲ್ಲಿ ಸಿಲುಕಿಕೊಂಡಿದ್ದಾರೆ. ರಾಜ್ ಕುಂದ್ರಾ ಅವರನ್ನು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಬಂಧಿಸಲಾಗಿತ್ತು.
ಈಗ ಶಿಲ್ಪಾ ಮತ್ತು ರಾಜ್ ಅವರ ಸಮಸ್ಯೆಗಳು ಮತ್ತೆ ಹೆಚ್ಚಿವೆ. ಈ ದಂಪತಿ ವಂಚನೆ ಮಾಡಿದ್ದಾರೆ ಎಂದು ಮುಂಬೈ ಮೂಲದ ಉದ್ಯಮಿಯೊಬ್ಬರು ಆರೋಪಿಸಿದ್ದಾರೆ. ಈ ವಂಚನೆ ಮೊತ್ತ 60 ಕೋಟಿ ರೂಪಾಯಿಗೂ ಅಧಿಕವಾಗಿದೆ.
ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾ ಅವರು 2015 ರಿಂದ 2023 ರ ನಡುವೆ ಸಾಲ ಮತ್ತು ಹೂಡಿಕೆ ಒಪ್ಪಂದದಲ್ಲಿ 60 ಕೋಟಿ ರೂ.ಗಳಿಗೂ ಹೆಚ್ಚು ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಬೆನ್ನಲ್ಲೇ ಇದೀಗ ಶಿಲ್ಪಾ ಶೆಟ್ಟಿಯ ಕನಸಿನ ರೆಸ್ಟೋರೆಂಟ್ ಅನ್ನು ಮುಚ್ಚಿದ್ದಾರೆ.
ಮುಂಬೈನ ತಮ್ಮ ರೆಸ್ಟೋರೆಂಟ್ ಬಾಸ್ಟಿಯನ್ ಬಾಂದ್ರಾ ಈಗ ಮುಚ್ಚುತ್ತಿದೆ ಎಂದು ಶಿಲ್ಪಾ ಶೆಟ್ಟಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಘೋಷಿಸಿದ್ದಾರೆ. ಈ ಗುರುವಾರ ಮುಂಬೈನ ಅತ್ಯಂತ ಪ್ರತಿಷ್ಠಿತ ತಾಣಗಳಲ್ಲಿ ಒಂದಾದ ಬಾಸ್ಟಿಯನ್ ಬಾಂದ್ರಾಕ್ಕೆ ನಾವು ವಿದಾಯ ಹೇಳುತ್ತಿರುವಾಗ ಒಂದು ಯುಗದ ಅಂತ್ಯವನ್ನು ಸೂಚಿಸುತ್ತದೆ.
ನಮಗೆ ಲೆಕ್ಕವಿಲ್ಲದಷ್ಟು ನೆನಪುಗಳು, ಮರೆಯಲಾಗದ ರಾತ್ರಿಗಳು ಮತ್ತು ನಗರದ ರಾತ್ರಿ ಜೀವನವನ್ನು ರೂಪಿಸಿದ ಕ್ಷಣಗಳನ್ನು ನೀಡಿದ ಸ್ಥಳವು ಈಗ ಅಂತಿಮ ಬಿಲ್ಲನ್ನು ಪಡೆಯುತ್ತಿದೆ ಎಂದು ನಟಿ ಶಿಲ್ಪಾ ಶೆಟ್ಟಿ ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಬರೆದಿದ್ದಾರೆ.