ಚಿತ್ರದುರ್ಗ: ರಂಗಭೂಮಿಗೆ ಅಪೂರ್ವ ಕೊಡುಗೆ ನೀಡಿದವರಿಗೆ ಸಾಣೆಹಳ್ಳಿ ಶ್ರೀ ಶಿವಕುಮಾರ ಕಲಾ ಸಂಘ ವತಿಯಿಂದ ಶ್ರೀ ಶಿವಕುಮಾರ ಪ್ರಶಸ್ತಿ ಹಿರಿಯ ನಟಿ ಉಮಾಶ್ರೀ ಅವರನ್ನು ಆಯ್ಕೆ ಮಾಡಲಾಗಿದೆ. 2004 ರಿಂದಲೂ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಹೆಸರಲ್ಲಿ ಪ್ರಶಸ್ತಿ ನೀಡಲಾಗುತ್ತಿದ್ದು, 50,000 ರೂ. ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.
ವಿಧಾನ ಪರಿಷತ್ ಸದಸ್ಯರಾದ ಉಮಾಶ್ರೀ ಅವರನ್ನು ಈ ಬಾರಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಣೆಹಳ್ಳಿಯಲ್ಲಿ ನವೆಂಬರ್ 2ರಿಂದ 7ರವರೆಗೆ ನಡೆಯಲಿರುವ ರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಉಮಾಶ್ರೀ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಾಣೆಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಪಂಡಿತಾರಾಧ್ಯ ಸ್ವಾಮೀಜಿ ತಿಳಿಸಿದ್ದಾರೆ.






























