ಬೆಳಗಾವಿ : ಚಳಿಗಾಲದ ಅಧಿವೇಶನ ಆರಂಭವಾಗುವ ಇಂದು ಮಾಜಿ ಸಿಎಂ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಮಹಾ ವಿಕಾಸ ಅಘಾಡಿ ಒಕ್ಕೂಟ ಮಾಡಿಕೊಂಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಗಡಿ ವಿವಾದವನ್ನು ಕೆದಕಿದ್ದಾರೆ. ಬೆಳಗಾವಿ ಗಡಿ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾರೆ.