ನವದೆಹಲಿ : ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ನನ್ನ ನಿವೃತ್ತಿ ಜೀವನದ ಬಗ್ಗೆ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಲಿದ್ದೇನೆ” ಎಂದು ಹೇಳಿದರು.
ಅಮಿತ್ ಶಾ ಅವರು ಓದುವ ಹವ್ಯಾಸ ಸಹ ಇದೆ. ಸುಮಾರು ೮,೦೦೦ ಪುಸ್ತಕಗಳನ್ನು ಅವರು ಹೊಂದಿದ್ದಾರೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ರಾಸಾಯನಿಕ ಗೊಬ್ಬರಗಳಿಂದ ಬೆಳೆದ ಗೋಧಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದರು.