ಕರ್ನಾಕದಾದ್ಯಂತ kpsc ನಡೆಸುತ್ತಿದ್ದ ಕೆಎಎಸ್ ಶ್ರೇಣಿಯ ಗ್ರೂಪ್ ಎ ಹಾಗೂ ಗ್ರೂಪ್ ಬಿ ಹುದ್ದೆಗಳಿಗೆ ಇಂದು ನಡೆಸಲಾಗುತ್ತಿದ್ದ ಪರೀಕ್ಷೆಯಲ್ಲಿ ದೊಡ್ಡ ಎಡವಟ್ಟು ಉಂಟಾಗಿದೆ.
ಓಎಂಆರ್ ಶೀಟ್ ನಲ್ಲಿ ನೊಂದಣಿ ಸಂಖ್ಯೆ ಅದಲು ಬದಲು ಆರೋಪ ಕೇಳಿಬಂದಿದ್ದು, ಪರೀಕ್ಷೆ ಬರೆಯದೆ ಪರೀಕ್ಷಾರ್ಥಿಗಳು ಹೊರ ಬಂದಿದ್ದಾರೆ. ಈಗಾಗಲೇ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು ಆಗಿದ್ದರಿಂದ ಕೆಪಿಎಎಸ್ ಮತ್ತೊಮ್ಮೆ ಪರೀಕ್ಷೆ ನಡೆಸುತಿತ್ತು. ಆದರೆ ಇದೀಗ ಮತ್ತೆ ಅದೇ ಎಡವಟ್ಟು ಮಾಡಿದೆ. ಇದರಿಂದ ಅಭ್ಯರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಪ್ರವೇಶ ಪತ್ರದ ಸಂಖ್ಯೆ, ಒಎಂಆರ್ ಶೀಟ್ ಸಂಖ್ಯೆ ಹೊಂದಾಣಿಕೆಯಾಗದ ಆರೋಪ ಕೇಳಿ ಬಂದಿದೆ.
ಪರೀಕ್ಷಾ ಕೇಂದ್ರದಿಂದ ಹೊರ ಬಂದು ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರವೇಶ ಪತ್ರ, ಒಎಂಆರ್ ಶೀಟ್ ನಲ್ಲಿ ಬೇರೆ ರಿಜಿಸ್ಟರ್ ನಂಬರ್ ಇದೆ. ಬೇರೆ ಬೇರೆ ರಿಜಿಸ್ಟರ್ ಸಂಖ್ಯೆಯಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಇದನ್ನು ಪ್ರಶ್ನಿಸಿದಕ್ಕೆ ಅಧಿಕಾರಿಗಳು ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಪರೀಕ್ಷೆ ಬರೆಯಿರಿ, ಇಲ್ಲವಾದರೆ ಬಿಡಿ ಎಂದು ಧಮಕಿ ಹಾಕಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಅಧಿಕಾರಿಗಳು, ಸಿಬ್ಬಂದಿಯ ವಿರುದ್ಧ ಪರೀಕ್ಷಾರ್ಥಿಗಳು ಆರೋಪಿಸಿದ್ದಾರೆ.