ದೆಹಲಿ: ಅಗ್ನಿಪಥ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೂರು ಸೇನೆಗಳಲ್ಲಿ ನೇಮಕಾತಿ ಯೋಜನೆಯನ್ನು ಮುಂದುವರಿಸುವಂತೆ ಸೂಚಿಸಿದೆ.
ಈ ಯೋಜನೆ ವಿರುದ್ಧ ಸಲ್ಲಿಕೆಯಾಗಿದ್ದ ಮೂರು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿದೆ. ದೆಹಲಿ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿರುವ ಸುಪ್ರೀಂಕೋರ್ಟ್, ಈ ತೀರ್ಪಿನಲ್ಲಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳ ಅಧಿಕಾರಾವಧಿ ನಾಲ್ಕು ವರ್ಷ ಇರಲಿದೆ.