ಕೇರಳ: ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ಒಪ್ಪಿಗೆ ನೀಡಿದೆ. ಕೊಟ್ಟಾಯಂ ಜಿಲ್ಲೆಯ ಚೆರುವಳ್ಳಿ ಎಸ್ಟೇಟ್‌ನಲ್ಲಿ ಈ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುವುದು. !
ಇದಕ್ಕಾಗಿ 2,266 ಎಕರೆ ಭೂಮಿಯನ್ನು ಮಂಜೂರು ಮಾಡಲಾಗುವುದು ಮತ್ತು ಹೆಚ್ಚುವರಿಯಾಗಿ 307 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು. ಇದರ ನಿರ್ಮಾಣ ಪೂರ್ಣಗೊಂಡ ಬಳಿಕ, 3.5 ಕಿ.ಮೀ ಉದ್ದದ ರನ್ ವೇ ಹೊಂದಿರುವ ವಿಮಾನ ನಿಲ್ದಾಣವಾಗಲಿದೆಯಂತೆ.!