ಬೆಂಗಳೂರು : ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿ ಅರೆಸ್ಟ್ ಆಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ವಂಚನೆ ಕೇಸ್‌ನಲ್ಲಿ ಚಂದ್ರಾ ಲೇಔಟ್ ಪೊಲೀಸರು ಆರೋಪಿಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು. ಆದರೆ ಜಾಮೀನು ಮಂಜೂರಾದ ಹಿನ್ನೆಲೆ ಆರೋಪಿಗಳನ್ನು ಮಂಗಳವಾರ ರಾತ್ರಿಯೇ ಪೊಲೀಸ್ ಕಸ್ಟಡಿಯಿಂದ ರಿಲೀಸ್ ಮಾಡಲಾಗಿದೆ.
ಆರೋಪಿ ಐಶ್ವರ್ಯ ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು 14.600 ಕೆಜಿಯಷ್ಟು ಚಿನ್ನಾಭರಣ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿತ್ತು. ಅಲ್ಲಿಂದ ಪೊಲೀಸರು ಐಶ್ವರ್ಯಗೌಡ ಹಾಗೂ ಆಕೆಯ ಪತಿಯನ್ನು ಕಸ್ಟಡಿಗೆ ಪಡೆದಿದ್ದರು.