ಬೆಂಗಳೂರು : ಐಶ್ವರ್ಯ ಗೌಡ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶ ಹೊರಡಿಸಿದೆ.
ಐಶ್ವರ್ಯ ವಿರುದ್ಧ ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ರಾಜ್ಯದ ಹಲವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಸಿಡಿಆರ್ ಪ್ರಕರಣ ಹೊರತು ಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ಕೇಸ್ ವರ್ಗಾಯಿಸಲಾಗಿದೆ. ಈಗಾಗಲೇ ಬ್ಯಾಟರಾಯನಪುರ ಉಪವಿಭಾಗದ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು. ಇದೀಗ ಮುಂದಿನ ತನಿಖೆಗೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಇನ್ನೊಂದೆಡೆ ಕಡೆ ಇಡಿಯಿಂದ ಕೂಡ ವಂಚನೆ ಕೇಸ್ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು. ಆದಾದ ಬಳಿಕ ಮಾಜಿ ಸಂಸದ ಡಿ.ಕೆ ಸುರೇಶ್ ಕೂಡ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇಡಿ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರಿಸಿದೆ.


































