ಮುಂಬೈ : ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ದಂಪತಿ ಮಗಳೊಂದಿಗೆ ಕಜರಾರೆ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಮೂಲಕ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ್ದಾರೆ.
ಇತ್ತೀಚೆಗೆ ಪತ್ನಿ ಐಶ್ವರ್ಯಾ ಮತ್ತು ಪುತ್ರಿ ಆರಾಧ್ಯ ಜೊತೆ ಅಭಿಷೇಕ್ ಬಚ್ಚನ್ ಅವರು ಪುಣೆಯಲ್ಲಿ ನಡೆದ ಸಂಬಂಧಿಕರ ಮದುವೆಗೆ ತೆರಳಿದ್ದರು. ಈ ವೇಳೆ, ಐಶ್ವರ್ಯಾ ಜೋಡಿ ಕಜರಾರೇ ಹಿಂದಿ ಹಾಡಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ್ದಾರೆ. ಇವರೊಂದಿಗೆ ಪುತ್ರಿ ಆರಾಧ್ಯ ಕೂಡ ಡ್ಯಾನ್ಸ್ ಮಾಡಿದ್ದಾರೆ
ಈ ಮದುವೆಯ ಹಲವು ಫೋಟೋಗಳು ಮತ್ತು ವಿಡಿಯೋಗಳು ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಐಶ್ವರ್ಯ ಹಾಗೂ ಅಭಿಷೇಕ್ ಮಗಳೊಂದಿಗೆ ಡ್ಯಾನ್ಸ್ ಮಾಡಿದ ವಿಡಿಯೋ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ. ಜೊತೆಗೆ ಈ ವೀಡಿಯೊಗೆ ನೆಟ್ಟಿಗರಿಂದ ಲೈಕ್‌ಗಳು ಮತ್ತು ಕಾಮೆಂಟ್‌ಗಳ ಸುರಿಮಳೆ ಬರುತ್ತಿದೆ.