ಸಂಪಾಜೆ: ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಸಂಭವಿಸಿದ ಕಾರು ಮತ್ತು ಟಿಪ್ಪರ್ ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ (205 ಮೈಸೂರು ರಾ.ಹೆದ್ದಾರಿಯ ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದಾಗಿ ಹೇಳಲಾಗಿದೆ.
ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.ಆದರೆ ಈ ನಡುವೆ ಅವರೂ ಕೂಡಾ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಕೊಡಗು ಜಿಲ್ಲೆಯ ಗೋಣಿಕೊಪ್ಪ ಮೂಲದ ಕಾರು ಇದಾಗಿದ್ದು, ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಮೃತರೆಲ್ಲರೂ ಒಂದೇ ಊರಿನವರು ಎಂದು ಹೇಳಲಾಗಿದೆ.