ಹೈದರಾಬಾದ್ : ‘ಪುಷ್ಪ 2′ ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈದರಾಬಾದ್‌ನ ನಾಂಪಲ್ಲಿ ಹೈಕೋರ್ಟ್ ಜನವರಿ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ಮಧ್ಯಂತರ ಬೇಲ್‌ನಲ್ಲಿದ್ದ ಅಲ್ಲು ಅರ್ಜುನ್ ಅವರು ಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಜಾಮೀನು ಅರ್ಜಿಯ ವಿಚಾರಣೆಯನ್ನು ಜನವರಿ 3ರಂದು ನಡೆಸಲಾಗುತ್ತದೆ ಎಂದು ನಾಂಪಲ್ಲಿ ಹೈಕೋರ್ಟ್ ತಿಳಿಸಿದೆ.
ಡಿ.4ರಂದು `ಪುಷ್ಪ 2’ ಪ್ರೀಮಿಯರ್ ವೇಳೆ, ಕಾಲ್ತುಳಿತದಿಂದ ರೇವತಿ ಎಂಬ ಮಹಿಳೆ ಸಾವನ್ನಪ್ಪಿದ್ದರು. ಈ ಹಿನ್ನೆಲೆ ನಟ ಅಲ್ಲು ಅರ್ಜುನ್ ಅವರನ್ನು ಡಿ.13ರಂದು ಪೊಲೀಸರು ಅರೆಸ್ಟ್ ಮಾಡಿದ್ದರು. ಬಳಿಕ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ.