ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮತ್ತು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪುನರ್ರಚಿಸಲಾಗಿದೇ. ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ನೂತನ ಮುಖ್ಯಸ್ಥರಾಗಿ ಮಾಜಿ ರಾ ಮತ್ತು ಎಡಬ್ಲ್ಯೂ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಮೋದಿ ಸರ್ಕಾರ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (ಎನ್‌ಎಸ್‌ಎಬಿ) ಪುನರ್ ರಚನೆ ಮಾಡಿದೆ. ಮಾಜಿ ರಾ ಮುಖ್ಯಸ್ಥ ಅಲೋಕ್ ಜೋಶಿ ಅವರು ಇದರ ನೇತೃತ್ವ ವಹಿಸಲಿದ್ದಾರೆ.
ಎನ್‌ಎಸ್‌ಎಬಿಯನ್ನು ಪುನರ್ರಚಿಸುವ ಕ್ರಮ ಕೈಗೊಳ್ಳಲಾಗಿದ್ದು, ಇದರಲ್ಲಿ ಈಗ 6 ಸದಸ್ಯರನ್ನು ಹೊಂದಿರುತ್ತದೆ. ಇದರಲ್ಲಿ ಮೂವರು ಮಿಲಿಟರಿ ಹಿನ್ನೆಲೆಯವರು, ಇಬ್ಬರು ಐಪಿಎಸ್ ಅಧಿಕಾರಿಗಳು ಮತ್ತು ಒಬ್ಬ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಸಿಬ್ಬಂದಿ ಸೇರಿದ್ದಾರೆ.