ಬಂಡಿಪೋರಾ : ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಯನ್ನು ಹತ್ಯೆ ಮಾಡಲಾಗಿದೆ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಎಲ್‌ಇಟಿಯ ಟಾಪ್ ಕಮಾಂಡರ್ ಅಲ್ತಾಫ್‌ನನ್ನು ಹತ್ಯೆ ಮಾಡುವ ಮೂಲಕ ಬಹುದೊಡ್ಡ ಬೇಟೆಯಾಡಿದೆ.
ಭಯೋತ್ಪಾದಕರು ಬಂಡಿಪೋರಾದಲ್ಲಿ ಅಡಗಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು ಈ ಹಿನ್ನಲೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಮೊದಲು ಉಗ್ರರು ಸೇನೆಯ ಮೇಲೆ ಗುಂಡು ಹಾರಿಸಿದ್ದರು. ಅದಕ್ಕೆ ಪ್ರತಿಯಾಗಿ ಸೇನೆಯು ಕೂಡ ದಾಳಿ ನಡೆಸಿತು. ಭದ್ರತಾ ಪಡೆಗಳು ಬೆನ್ನಟ್ಟುತ್ತಿದ್ದ ಭಯೋತ್ಪಾದಕರಲ್ಲಿ ಒಬ್ಬನಿಗೆ ಆರಂಭಿಕ ಗುಂಡಿನ ಚಕಮಕಿಯಲ್ಲಿ ಗಾಯಗಳಾಗಿವೆ. ಇನ್ನು ಎನ್‌ಕೌಂಟರ್‌ನಲ್ಲಿ, ಹಿರಿಯ ಅಧಿಕಾರಿಯ ವೈಯಕ್ತಿಕ ಭದ್ರತಾ ತಂಡದ ಇಬ್ಬರು ಪೊಲೀಸ್ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.