ಜಮ್ಮು- ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ.
ಏಪ್ರಿಲ್ 22 ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ ಎಂದು ನಂಬಲಾದ ಎಲ್ಇಟಿ ಭಯೋತ್ಪಾದಕರನ್ನು ಪತ್ತೆಹಚ್ಚುವ ನಿರಂತರ ಪ್ರಯತ್ನಗಳ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.
ಜಮ್ಮು ಕಾಶ್ಮೀರದ ಬಂಡಿಪೋರ ಬಳಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿಯಲ್ಲಿ ಇದೀಗ ಭಾರತೀಯ ಸೇನೆ ಲಷ್ಕರ್-ಎ-ತೊಯ್ಬಾ ಕಮಾಂಡರನ್ನು ಹತ್ಯೆ ಮಾಡಿದೆ. ಲಷ್ಕರ್-ಎ-ತೊಯ್ಬಾ ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಸೇನೆ ಹೊಡೆದುರುಳಿಸಿದೆ. ಯೋಧರು ಮತ್ತು ಉಗ್ರರ ನಡುವೆ ಭಾರಿ ಗುಂಡಿನ ಕಾಳಗ ನಡೆದಿತ್ತು. ಕಾರ್ಯಾಚರಣೆಯ ವೇಳೆ ಒಬ್ಬ ಯೋಧ ಹಾಗೂ ಇಬ್ಬರು ಪೊಲೀಸರಿಗೆ ಗಂಭೀರವಾದ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಪ್ರವಾಸಿಗರ ಮೇಲೆ ನಡೆದ ಗುಂಡಿನ ದಾಳಿಗೆ ಪ್ರತಿಕಾರ ತೀರಿಸಿಕೊಂಡಿದೆ.