ಎಲ್ಲಾ ಮಾದರಿಯ ಕ್ರಿಕೆಟ್ ಗೆ ಭಾರತದ ಮಾಜಿ ಸ್ಪಿನ್ನರ್ ಅಮಿತ್ ಮಿಶ್ರಾ ಗುರುವಾರ ನಿವೃತ್ತಿ ಘೋಷಿಸಿದರು.
ಮಿಶ್ರಾ 22 ಟೆಸ್ಟ್, 36 ಏಕದಿನ ಮತ್ತು 10 ಟಿ20ಐಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಒಟ್ಟು 156 ವಿಕೆಟ್ಗಳನ್ನು ಕಬಳಿಸಿದ್ದಾರೆ. 2003 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಅವರು ಐದು ಓವರ್ಗಳಲ್ಲಿ 1/29 ವಿಕೆಟ್ಗಳನ್ನು ಪಡೆದರು.
ಮಿಶ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ ಅತ್ಯಂತ ಯಶಸ್ವಿ ಸ್ಪಿನ್ನರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. 42 ವರ್ಷದ ಮಿಶ್ರಾ 162 ಪಂದ್ಯಗಳಿಂದ 174 ವಿಕೆಟ್‌ಗಳನ್ನು ಪಡೆಯುವ ಮೂಲಕ ಟೂರ್ನಿಯ ಇತಿಹಾಸದಲ್ಲಿ ಎಂಟನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.