ನವದೆಹಲಿ : ಕಾಂಗ್ರೆಸ್ ಸರ್ಕಾರ ತನ್ನ ಅವಧಿಯಲ್ಲಿ 77 ಬಾರಿ ಸಂವಿಧಾನವನ್ನು ತಿದ್ದುಪಡಿ ಮಾಡಿದೆ. ಇದರೊಂದಿಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸಿದ ಹಿನ್ನೆಲೆ ರಾಜ್ಯಸಭೆಯಲ್ಲಿಂದು ನಡೆದ ವಿಶೇಷ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ವಿಶ್ವದಲ್ಲಿ ಎಲ್ಲೂ ಇಲ್ಲದ ಸಂವಿಧಾನ ನಮ್ಮದು, ಸಾಕಷ್ಟು ಪ್ರಕ್ರಿಯೆ ಬಳಿಕ ಸಂವಿಧಾನ ಅಂತಿಮಗೊಳಿಸಲಾಯಿತು. ನಮ್ಮ ದೇಶದ ಸಂವಿಧಾನವು ಒಳ್ಳೆಯ ಅಂಶಗಳನ್ನು ಅಳವಡಿಸಿಕೊಂಡಿದೆ. ನೋಡುವ ದೃಷ್ಟಿ ಕೋನ ಬದಲಾಗಬೇಕು, ವಿದೇಶ ಕಣ್ಣುಗಳಲ್ಲಿ ನೋಡಿದ್ರೆ ತಪ್ಪಾಗಿ ಕಾಣುತ್ತದೆ. ಒಳ್ಳೆಯ ಅಂಶಗಳಿದ್ದರೆ ಅವಳವಡಿಸಿಕೊಳ್ಳಲು ನಮ್ಮ ಹಿರಿಯರು ಹೇಳಿದ್ದಾರೆ. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ. ನಾವು ನಮ್ಮ ಇತಿಹಾಸ ಗಮನದಲ್ಲಿಟ್ಟುಕೊಂಡು ಒಳ್ಳೆಯ ಅಂಶಗಳನ್ನು ಅಳವಡಿಸಿಕೊಂಡಿದ್ದೇವೆ. ವೇದ ಉಪನಿಷತ್ತ, ಚಾಣಕ್ಯ ನೀತಿ, ರಾಮಯಣ, ಮಹಾಭಾರತದಲ್ಲಿರುವ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಎಂದರು.
ಸಂವಿಧಾನ ತಿದ್ದುಪಡಿಗೆ ಸಂವಿಧಾನವೇ ಅವಕಾಶ ನೀಡಿದೆ. ಕಾಂಗ್ರೆಸ್ ಅವಧಿಯಲ್ಲಿ 77 ಬಾರಿ ಸಂವಿಧಾನ ತಿದ್ದುಪಡಿ ಆಗಿದೆ, ಬಿಜೆಪಿ 22 ಬಾರಿ ಮಾತ್ರ ತಿದ್ದುಪಡಿ ಆಗಿದೆ. ಯಾರು ಹೇಗೆ ತಿದ್ದುಪಡಿ ಮಾಡಿದರು? ಅದೆಷ್ಟು ಮುಖ್ಯವಾಗಿತ್ತು ಎನ್ನುವುದು ಮುಖ್ಯ ಎಂದು ಹೇಳಿದರು.