ಬೆಂಗಳೂರು: ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್ ಪೆನ್ಷನ್ ಮೊಹಲ್ಲಾದಲ್ಲಿ ರಸ್ತೆ ಬದಿ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲುಗಳನ್ನು ಕೊಯ್ದು ಕೃತ್ಯ ಮೆರೆದ ಪ್ರಕರಣದಲ್ಲಿ ಓರ್ವನನ್ನು ಕಾಟನ್‌ಪೇಟೆ ಪೊಲೀಸರು ಆರೋಪಿ ಬಂಧಿಸಿದ್ದಾರೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು ಸ್ಥಳ ಮಹಜರ್ ನಡೆಸಿದ್ದಾರೆ. ತಡರಾತ್ರಿ ಆರೋಪಿಯನ್ನು ಕಾಟನ್ ಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.