ಬೆಂಗಳೂರು : ಲಾಯರ್ ಜಗದೀಶ್ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮಂಜುನಾಥ್ ಎಂಬುವರು ವಕೀಲ ಜಗದೀಶ್ ವಿರುದ್ಧ ದೂರು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಜಾತಿ ಆಧಾರಿತ ಪ್ರಚೋದನಕಾರಿ ಮಾತುಗಳನ್ನಾಡಿ ಸಮಾಜದಲ್ಲಿ ಅಶಾಂತಿ ಮೂಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಕೀಲ ಜಗದೀಶ್ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196 ಮತ್ತು 299 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.