ಬೆಂಗಳೂರು : ವಿಧಾನಸೌಧದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಸರ್ಕಾರ –ಅರಮನೆ ತಿಕ್ಕಾಟದ ಹಿನ್ನೆಲೆ ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಇಂದು ಮಧ್ಯಾಹ್ನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆಯಿದೆ. ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸುವ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಣಯ ಕೈಗೊಳ್ಳಬೇಕಿದೆ. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಕರೆದಿದ್ದಾರೆ.
