ದಾವಣಗೆರೆ : ಮೀನುಗಾರಿಕೆ ಇಲಾಖೆವತಿಯಿಂದ ಪ್ರಸಕ್ತ ಸಾಲಿನ ವಸತಿ ರಹಿತ ಮೀನುಗಾರರಿಗೆ ಸರ್ಕಾರದ ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡುವ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 25 ರಂತೆ ಒಟ್ಟು 175 ಮನೆಗಳನ್ನು ಹಂಚಿಕೆ ಮಾಡಲಾಗಿದೆ. ಅರ್ಜಿಯನ್ನು ಕಚೇರಿಯ ವೇಳೆಯಲ್ಲಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ದಾವಣಗೆರೆ, ಹರಿಹರ, ಹೊನ್ನಾಳಿ, ಚನ್ನಗಿರಿ, ಜಗಳೂರು ಕಚೇರಿಗಳಿಗೆ ಭೇಟಿ ನೀಡಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿರುತ್ತದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.