ಚಿತ್ರದುರ್ಗ: ಪ್ರಸಕ್ತ ಸಾಲಿನ ಎರಡು ವರ್ಷಗಳ ಬಿಇಡಿ ಕೋರ್ಸಿಗೆ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶಾತಿ ಸಂಬಂಧ ಇಲಾಖಾ ವೆಬ್ಸೈಟ್ www.schooleducation.kar.gov.in ಮೂಲಕ ಲಾಗಿನ್ ಆಗಿ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ನವೆಂಬರ್ 03 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕಡ್ಡಾಯವಾಗಿ ಅಗತ್ಯವಿರುವ ಎಲ್ಲಾ ಮೂಲ ದಾಖಲೆಗಳು ಹಾಗೂ ಒಂದು ಸೆಟ್ ಸ್ವಯಂ ದೃಢೀಕೃತ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸಿದ ಒಂದು ವಾರದೊಳಗೆ ಆಯ್ಕೆ ಮಾಡಿಕೊಂಡ ನೋಡಲ್ ಕೇಂದ್ರದಲ್ಲಿ ಪರಿಶೀಲನೆಗೆ ಹಾಜರಾಗಬೇಕು ಎಂದು ಚಿತ್ರದುರ್ಗ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರು ಹಾಗೂ ಪದನಿಮಿತ್ತ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ನಲ್ಲಿರುವ ಸೂಚನೆಗಳನ್ನು ಪಾಲಿಸಲು ಕೋರಿದ್ದಾರೆ.