ನವದೆಹಲಿ: ಕಳೆದೊಂದು ವಾರದಿಂದ ಯುದ್ದೋನ್ಮಾದದಲ್ಲಿರುವ ಭಾರತ ಮತ್ತು ಪಾಕಿಸ್ತಾನ ಇದೀಗ ಯುದ್ಧಕ್ಕೆ ಬ್ರೇಕ್ ಹಾಕಿ ಪರಸ್ಪರ ಒಪ್ಪಂದ ಮಾಡಿಕೊಂಡಿರುವ ಮಹತ್ವದ ಸಂಗತಿಯೊಂಧು ಬೆಳಕಿಗೆ ಬಂದಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಭುಗಿಲೆದ್ದಿರುವ ಪಕ್ಷುಬ್ದತೆ ನಡುವೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಹತ್ವದ ಘೋಷಣೆಯೊಂದನ್ನ ಹೊರಡಿಸಿದ್ದಾರೆ. ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆಸಹಿ ಒಪ್ಪಿಗೆ ಸೂಚಿಸಿವೆ ಎಂದು ಹೇಳಿದ್ದಾರೆ. ವಾರಗಳಿಂದ ನಡೆಯುತ್ತಿದ್ದ ಭಾರತ ಹಾಗೂ ಪಾಕಿಸ್ತಾನ ನಡುವೆ ಕೊನೆಗೂ ಕದನ ವಿರಾಮ ಘೋಷಣೆ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ಎಕ್ಸ್ನಲ್ಲಿ ಟ್ವೀಟ್ ಮಾಡಿದ ಟ್ರಂಪ್ ಭಾರತ ಹಾಗೂ ಪಾಕಿಸ್ತಾನ ಪೂರ್ಣ ಪ್ರಮಾಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದೆ ಎಂದು ಹೇಳಿದ್ದಾರೆ.ಇದರ ಬೆನ್ನಲ್ಲೇ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವೂ ಅಧಿಕೃತ ಘೋಷಣೆ ಹೊರಡಿಸಿದೆ.
ಉಧಮ್ಪುರ, ಪಠಾಣ್ಕೋಟ್, ಆದಮ್ಪುರ ಮತ್ತು ಭುಜ್ ಸೇರಿದಂತೆ ಭಾರತೀಯ ವಾಯುಪಡೆಯ ನೆಲೆಗಳ ಮೇಲೆ ಹಾಗೂ ಶ್ರೀನಗರ ಮತ್ತು ಅವಂತಿಪೋರಾದಲ್ಲಿನ ಐಎಎಫ್ ನೆಲೆಗಳಲ್ಲಿನ ನಾಗರಿಕ ಮೂಲಸೌಕರ್ಯಗಳ ಮೇಲೆ ಪಾಕಿಸ್ತಾನ ನಡೆಸಿದ ಸರಣಿ ಸಂಘಟಿತ ದಾಳಿಗೆ ಪ್ರತಿಯಾಗಿ ಭಾರತ ಶನಿವಾರ ಮುಂಜಾನೆ ಎಂಟು ಪಾಕಿಸ್ತಾನಿ ಮಿಲಿಟರಿ ನೆಲೆಗಳ ಮೇಲೆ ನಿಖರವಾದ ದಾಳಿಗಳನ್ನು ನಡೆಸಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ. ಪಶ್ಚಿಮ ಗಡಿ ಮತ್ತು ನಿಯಂತ್ರಣ ರೇಖೆಯಾದ್ಯಂತ ಮಿಲಿಟರಿ ಮತ್ತು ನಾಗರಿಕ ಆಸ್ತಿಗಳನ್ನು ಗುರಿಯಾಗಿಸಲು ಪಾಕಿಸ್ತಾನ ಪಡೆಗಳು ಡ್ರೋನ್ಗಳು, ಅಡ್ಡಾದಿಡ್ಡಿ ಯುದ್ಧಸಾಮಗ್ರಿಗಳು, ಹೈ-ಸ್ಪೀಡ್ ಕ್ಷಿಪಣಿಗಳು ಮತ್ತು ಯುದ್ಧ ವಿಮಾನಗಳನ್ನು ಬಳಸಿದ ನಂತರ ಈ ದಾಳಿಗಳು ನಡೆದವು.