ಚೆನ್ನೈ : ತಿರುಪತಿಯಲ್ಲಿ ಟೋಕನ್ ವಿತರಣೆ ಕೇಂದ್ರದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟಿರುವ ಭಕ್ತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಆಂಧ್ರಪ್ರದೇಶ ಸರ್ಕಾರ ಹೇಳಿದೆ.
ತಿರುಪತಿ ನಗರದ ಬೈರಾಗಿಪಟ್ಟೇಡದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.48 ಜನರು ಅಸ್ವಸ್ಥರಾಗಿದ್ದಾರೆ.ಗಾಯಾಳುಗಳನ್ನು ರುಯಾ ಮತ್ತು ಸ್ವಿಮ್ಸ್‌ಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದೆಡೆ ಕಾಲ್ತುಳಿತ ಘಟನೆಯ ವಿರುದ್ಧ ಪ್ರಕರಣ ದಾಖಲಾಗಿದೆ. ನಾರಾಯಣವನಂ ತಹಸೀಲ್ದಾರ್ ಅವರ ದೂರಿನಂತೆ ಪೂರ್ವ ಪಿಎಸ್‌ನಲ್ಲಿ ಬಿಎನ್‌ಎಸ್ ಕಲಂ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವೈಕುಂಠ ಏಕಾದಶಿ ಪ್ರಯುಕ್ತ ತಿರುಪತಿಯ ವಿಷ್ಣು ನಿವಾಸಂನಲ್ಲಿ ಶುಕ್ರವಾರದಿಂದ 10 ದಿನಗಳ ಕಾಲ ವೈಕುಂಠ ದ್ವಾರ ಸರ್ವ ದರ್ಶನಕ್ಕಾಗಿ ಟೋಕನ್ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದೆ.
ಗುರುವಾರದಿಂದ ತಿರುಪತಿಯ 9 ಕೇಂದ್ರಗಳಲ್ಲಿ 94 ಕೌಂಟರ್‌ಗಳ ಮೂಲಕ ವೈಕುಂಠ ದರ್ಶನ ಟೋಕನ್‌ಗಳನ್ನು ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿದೆ. ನಿನ್ನೆ ಸಂಜೆ ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಜನವರಿ 10, 11 ಮತ್ತು 12 ರಂದು ಮೊದಲ ಮೂರು ದಿನಗಳ ವೈಕುಂಠ ದ್ವಾರ ದರ್ಶನಕ್ಕಾಗಿ ಇಂದು ಬೆಳಗ್ಗೆ 1.20 ಲಕ್ಷ ಟೋಕನ್‌ಗಳನ್ನು ನೀಡಲು ಟಿಟಿಡಿ ನಿರ್ಧರಿಸಿದೆ.