ಬೆಂ.ಗ್ರಾ.ಜಿಲ್ಲೆ : ಭಾರತ ಸರ್ಕಾರದ ಮಿಷನ್ ಶಕ್ತಿ ಮಾರ್ಗಸೂಚಿ ಹಾಗೂ ಭಾರತ ಸರ್ಕಾರದ ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಅನ್ವಯ ಕರ್ನಾಟಕ ರಾಜ್ಯದಲ್ಲಿ ಅಂಗನವಾಡಿ ಕಂ ಕ್ರಷ್ ಕೇಂದ್ರಗಳನ್ನು ಪ್ರಾರಂಭಿಸಲು ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕಾತಿಗೆ ಮಿಷನ್ ಶಕ್ತಿ ಯೋಜನೆಯ ಮಾರ್ಗಸೂಚಿಯನ್ವಯ ಮತ್ತು ರಾಜ್ಯ ಸರ್ಕಾರ ಮಾರ್ಗಸೂಚಿಯನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ಅಂಗನವಾಡಿ ಕಂ ಕ್ರಷ್ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಖಾಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಇತ್ಯಾದಿ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,. ಕೊಠಡಿ ಸಂ:206, 2ನೇ ಮಹಡಿ ಇಲ್ಲಿ ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.































