ದಾವಣಗೆರೆ: ಚನ್ನಗಿರಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆ ಮತ್ತು 68 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಆಯ್ಕೆ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿರುತ್ತದೆ.
ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ನವಂಬರ್ 27 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಜಿ.ಎಂ. ಕಾಂಪ್ಲೆಕ್ಸ್, ಐ.ಸಿ.ಐ.ಸಿ.ಐ. ಬ್ಯಾಂಕ್ ಪಕ್ಕ, ಎನ್.ಹೆಚ್-13 ಮುಖ್ಯ ರಸ್ತೆ, ಚನ್ನಗಿರಿ ಇಲ್ಲಿಗೆ ಸಲ್ಲಿಸಬೇಕು. ನಂತರ ಯಾವುದೇ ಆಕ್ಷೇಪಣೆಗಳನ್ನು ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲವೆಂದು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)































