ಹುಬ್ಬಳ್ಳಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಆ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿಕೆ ಆಗಿದೆ. ಲಿಂಗರಾಜ ಬೀರನೂರ(19) ಮೃತ ಅಯ್ಯಪ್ಪ ಮಾಲಾಧಾರಿ. ಬಾಕಿ ಐವರಿಗೆ ಚಿಕಿತ್ಸೆ ಮುಂದುವರೆದಿದೆ.
ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಭಾನುವಾರ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿ ಗಾಯಗೊಂಡಿದ್ದರು. 9 ಜನರ ಪೈಕಿ ನಿನ್ನೆ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ರಾಜು ಮೂಗೇರಿ ಸಾವನ್ನಪ್ಪಿದ್ದರೆ. ಮೃತ ರಾಜು ಮೋಗೇರಿ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದ. ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಘೋರ ದುರಂತವನ್ನು ಸರ್ಕಾರ ಗಂಭೀರವಾಗಿ ಪರಿಣಮಿಸಿತ್ತು .
9 ಜನರ ಪೈಕಿ ನಾಲ್ಕು ಜನ ಸಾವನ್ನಪ್ಪಿದ್ದು, ಐದು ಜನರ ಸ್ಥಿತಿ ಬಹಳ ಗಂಭೀರವಾಗಿದೆ. 9 ಜನ ಮೂಲಾಧಾರಿಗಳ ಪೈಕಿ 12 ವರ್ಷದ ವಿನಾಯಕ್ ಬಾರಕೇರ ಮಾತ್ರ ಚಿಕಿತ್ಸೆಗೆ ಸ್ಪಂದಿಸಿದ್ದಾನೆ. ಹೀಗಾಗಿ ಬಾಲಕ ನನ್ನ ಐಸೋಲೇಶನ್ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಕಿಮ್ಸ್ ವೈದ್ಯರು ಉಳಿದ ಐದು ಜನರಿಗೆ ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದೆ.