ಉತ್ತರ ಪ್ರದೇಶ : ಮಹಾ ಕುಂಭಮೇಳದಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಸೆಕ್ಟರ್ -8 ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಧಿಕಾರಿಗಳು ತಕ್ಷಣ ಎಚ್ಚೆತ್ತುಕೊಂಡು ಯಾತ್ರಿಕರನ್ನು ಅಲ್ಲಿಂದ ಸ್ಥಳಾಂತರಿಸಿದರು. ಏತನ್ಮಧ್ಯೆ, ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ. ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಮಹಾಕುಂಭಮೇಳದ 30 ದಿನಗಳ ಅವಧಿಯಲ್ಲಿ ಇಂತಹ ಅಗ್ನಿ ಅವಘಡಗಳು ಸಂಭವಿಸುತ್ತಿರುವುದು ಇದು ಏಳನೇ ಬಾರಿಯಾಗಿದೆ.
