ಬಿಹಾರ : ಯುಪಿಎಸ್‌ಸಿಯು ಭಾರತದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಕಠಿಣ ಪರಿಶ್ರಮ ಹಾಗೂ ಸಾಧಿಸುವ ಛಲ ಅಗತ್ಯ. ಹೀಗೆ ಮೂರು ಬಾರಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೂ, ಛಲ ಬಿಡದೆ ನಾಲ್ಕನೇ ಬಾರಿಗೆ ಉತ್ತೀರ್ಣರಾಗಿ ಐಎಎಸ್ ಅಧಿಕಾರಿಯಾದ ಅಂಶುಮನ್ ರಾಜ್ ಅವರ ಸ್ಫೂರ್ತಿದಾಯಕ ಕತೆ ಇದು.
ಅಂಶುಮನ್ ರಾಜ್ ಅವರು ಬಿಹಾರದ ಬಕ್ಸರ್ ಜಿಲ್ಲೆಯ ಸಣ್ಣ ಹಳ್ಳಿಯಿಂದ ಬಂದವರು. ಅವರು ತಮ್ಮ ಆರಂಭಿಕ ಶಿಕ್ಷಣವನ್ನು ಜವಾಹರ್ ನವೋದಯ ವಿದ್ಯಾಲಯದಲ್ಲಿ ಪೂರ್ಣಗೊಳಿಸಿದರು. ಜೆಎನ್‌ವಿ ರಾಂಚಿಯಿಂದ 12 ನೇ ತರಗತಿಯನ್ನು ಪದವಿ ಪಡೆದರು.
ತನ್ನ ಹಳ್ಳಿಯಲ್ಲಿದ್ದಾಗ ಅಂಶುಮಾನ್ ಅವರು ಯುಪಿಎಸ್‌ಸಿ ಪರೀಕ್ಷೆ ಬರೆಯಲು ನಿರ್ಧರಿಸುತ್ತಾರೆ. ಅವರು ಯುಪಿಎಸ್‌ಸಿ ಪರೀಕ್ಷೆ ಬರೆಯಲು ಯಾವುದೇ ಕೋಚಿಂಗ್ ಸೆಂಟರ್‌ಗಳಿಗೆ ತೆರಳದೇ ಸ್ವಯಂ-ಅಧ್ಯಯನ ಮಾಡಲು ನಿರ್ಧರಿಸುತ್ತಾರೆ. ಮೊದಲ ಬಾರಿ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು ಉತ್ತೀರ್ಣರಾಗುವುದರೊಂದಿಗೆ ಅವರಿಗೆ ಐಆರ್‌ಎಸ್ ಸ್ಥಾನ ದೊರಕುತ್ತದೆ. ಆದಾಗ್ಯೂ, ಅವರು ಐಎಎಸ್ ಅಧಿಕಾರಿಯಾಗುವ ಉದ್ದೇಶದಿಂದ ಮತ್ತೊಮ್ಮೆ ಯುಪಿಎಸ್‌ಸಿ ಪರೀಕ್ಷೆ ಬರೆಯುತ್ತಾರೆ.
2019 ರಲ್ಲಿ ನಾಲ್ಕನೇ ಬಾರಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅಂಶುಮಾನ್ ಅವರು 107 ರ ರ‍್ಯಾಂಕ್ ಗಳಿಸಿ ಉತ್ತೀರ್ಣರಾಗುತ್ತಾರೆ. ಈ ಮೂಲಕ ಐಎಎಸ್ ಅಧಿಕಾರಿಯಾಗುವಲ್ಲಿ ಅವರು ಯಶಸ್ವಿಯಾಗುತ್ತಾರೆ.