ಪ್ರಯಾಗ್ರಾಜ್ :ಕುಂಭಮೇಳಕ್ಕೆ ಆಗಮಿಸಿರುವ ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಅವರ ಪತ್ನಿ ಲಾರೆನ್ ಪೊವೆಲ್ ಜಾಬ್ಸ್ ಅವರು ತನ್ನ ಗುರು ನಿರಂಜನಿ ಅಖಾರದ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರಿಂದ ಗೋತ್ರ ಸ್ವೀಕರಿಸಿದ್ದಾರೆ. ಈ ಮೂಲಕ ಹೊಸ ಗುರುತು ಪಡೆದುಕೊಂಡಿದ್ದಾರೆ.
ಪ್ರಯಾಗ್ರಾಜ್ಗೆ ಕಾಲಿಟ್ಟ ಬಳಿಕ ಮೊದಲು ತಮ್ಮ ಗುರುಗಳಾದ ನಿರಂಜನಿ ಅಖಾಡ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರನ್ನ ಭೇಟಿಯಾಗಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿದ ನಿರಂಜನಿ ಅಖಾರದ ಕೈಲಾಶಾನಂದ ಗಿರಿ ಮಹಾರಾಜ್ ಅವರು, ಲಾರೆನ್ ಪೊವೆಲ್ ಅವರಿಗೆ ಗೋತ್ರದ ಪ್ರಕಾರ ಕಮಲಾ ಎಂಬ ಹೆಸರು ಕೊಟ್ಟಿದ್ದೇನೆ. ಲಾರೆನ್ ಅವರು ನಮಗೆ ಮಗಳಿದ್ದಂತೆ. ಆಕೆ ಭಾರತಕ್ಕೆ ಎರಡನೇ ಬಾರಿ ಬರುತ್ತಿದ್ದಾರೆ. ಕುಂಭಮೇಳಕ್ಕೆ ಎಲ್ಲರಿಗೂ ಸ್ವಾಗತ ಎಂದು ಹೇಳಿದ್ದಾರೆ.