ಭಾರತೀಯ ರೈಲ್ವೇ ನೇಮಕಾತಿ ಮಂಡಳಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಹದಿನಾರು ವಲಯಗಳಿಗೆ ಈ ನೇಮಕಾತಿ ನಡೆಯುತ್ತಿದ್ದು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಎಪ್ರಿಲ್ ಹತ್ತರಿಂದ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು ಮೇ ಒಂಭತ್ತರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸಹಾಯಕ ಲೋಕೋ ಫೈಲೆಟ್ ನ ಒಟ್ಟು ಒಂಭತ್ತು ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹತ್ತನೇ ತರಗತಿ ಪಾಸ್ ಆಗಿರಬೇಕು. ಜೊತೆಗೆ ಇಂಜಿನಿಯರಿಂಗ್ ಪದವಿ, ಡಿಪ್ಲೋಮಾ ಪದವಿ ಆಗಿರಬೇಕು. ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಸಾಮರ್ಥ್ಯದ ಪರೀಕ್ಷೆ ಮೂಲಕ ಆಯ್ಕೆ ಪ್ರಕ್ರಿಯೆ ಮಾಡಿಕೊಳ್ಳಲಾಗುತ್ತದೆ.