Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕೈಮಗ್ಗ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ

0

 

ಚಿತ್ರದುರ್ಗ: 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜೂನ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.

ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‍ನ್ನು ಒಂದು ವಿಷಯವಾಗಿ ಅಭ್ಯಸಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.

ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರೂ ಶಿಷ್ಯವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.

ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಲಿಂಗ್‍ಗಾಗಿ ಕರೆಯಲಾಗುವುದು.

ಡಿಪ್ಲೋಮಾ ಕೋರ್ಸ್‍ಗಾಗಿ ಲಭ್ಯವಿರುವ ಸಂಸ್ಥೆಗಳ ವಿವರ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಗದಗ-ಬೆಟಗೇರಿ (ಕರ್ನಾಟಕ) 22 ಅಭ್ಯರ್ಥಿಗಳು, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ. ಸೇಲಂ (ತಮಿಳನಾಡು) 17, ಎಸ್.ಪಿ.ಕೆ.ಎಂ. ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನಲ್ಲೂರು ಜಿಲ್ಲೆ, ಆಂದ್ರಪ್ರದೇಶ)  03,  ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) 02 ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು.

ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ  ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಭಾಗ್ಯ ಕಾಂಪ್ಲೆಕ್ಸ್, ಬಿ.ಡಿ ರಸ್ತೆ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-221426ಗೆ ಸಂಪರ್ಕಿಸಿ ಪಡೆಯಬಹುದು.

ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಲು ಲಿಂಕ್ https://khtigadag.ac.in/admissionForm.pdf    ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಚಿತ್ರದುರ್ಗ ಕಚೇರಿಗೆ ಜೂನ್ 15 ರ ಒಳಗಾಗಿ ಅಥವಾ  ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-582102, (ದೂರವಾಣಿ ಸಂಖ್ಯೆ-08372-297221) ಮೊಬೈಲ್ ಸಂಖ್ಯೆ 9448644074 ಇವರ ಕಚೇರಿಗೆ ನೇರವಾಗಿ ಸಲ್ಲಿಸುವುದು ಎಂದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ತಿಳಿಸಿದ್ದಾರೆ.

Leave A Reply

Your email address will not be published.