ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡುಬಿದಿರೆ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ 19 ರಿಂದ 45 ವರ್ಷದ ಒಳಗಿರುವ, ದೈಹಿಕ ಸದೃಢತೆ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಮೇರಿಹಿಲ್‌ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಿಂದ ಅರ್ಜಿ ಪಡೆಯಬಹುದು. ಅ.10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಜಿಲ್ಲಾ ಗೃಹರಕ್ಷಕದಳದ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.