ಚಿತ್ರದುರ್ಗ: 2025-26ನೇ ಸಾಲಿಗೆ ಬಿ.ಎಸ್‍ಸಿ ನರ್ಸಿಂಗ್ ಮತ್ತು ಜಿಎನ್‍ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಪೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಸೇವಾಸಿಂಧು ವೆಬ್‍ಸೈಟ್ https://sevasindhu.karnataka.gov.in/sevasindhu/departmentservicesಈ ಲಿಂಕ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸಲು ಸೂಚಿಸಿದೆ.
ಅರ್ಹತೆಗಳು: ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಕೋರ್ಸ್‍ನ ಅವಧಿ ಪೂರ್ಣಾವಧಿ. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯ ಅನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿಗಳು ಈ ಯೋಜನೆಯಡಿ ಉತ್ತೇಜನ ಮೊತ್ತವನ್ನು ಪಡೆಯಲು ಪ್ರತಿ ಶೈಕ್ಷಣಿಕ ವರ್ಷದಲ್ಲಿ ಹೊಸ ಅರ್ಜಿಗಳನ್ನು ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ ಸಿಡಿಂಗ್ ಆಗಿರುವ ಬಗ್ಗೆ ಹಾಗೂ ಎನ್‍ಪಿಸಿಐ ಮ್ಯಾಪಿಂಗ್ ಆ್ಯಕ್ಟಿವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.