2025-26ನೇ ಸಾಲಿನ ಕರ್ನಾಟಕ ಕಟ್ಟಡ ಹಾಗೂ ಇತರೆ ಕಾರ್ಮಿಕರ ಮಂಡಳಿ ಇಲಾಖೆಯಿಂದ ಇದರ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮತ್ತು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಕಾರ್ಮಿಕ ಇಲಾಖೆಯು ಈ ಬಗ್ಗೆ ತಿಳಿಸಿದ್ದು, ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಸದಸ್ಯತ್ವ ಹೊಂದಿದ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಅರ್ಜಿಯನ್ನು SSP ಮೂಲಕ ಆನ್ಲೈನ್ ನಲ್ಲಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿದ್ದು, https://ssp.karnataka.gov.in/ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಕಟ್ಟಡ ಕಾರ್ಮಿಕರ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಈ ಸಹಾಯಧನಕ್ಕೆ SSLC ಅಥವಾ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, 2024-25ನೇ ಸಾಲಿನಲ್ಲಿ 90% ಅಧಿಕ ಅಂಕ ಪಡೆದಿರಬೇಕು.
ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯತ್ವ ಹೊಂದಿದ ಕಾರ್ಮಿಕರ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ಕೊನೆ ದಿನವಾಗಿರುತ್ತದೆ.
ಅರ್ಜಿಯನ್ನು https://karbwwb.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ, ಅಥವಾ ನಿಮ್ಮ ಹತ್ತಿರದ ತಾಲೂಕು ಕಾರ್ಮಿಕ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ.