ಶಿವಮೊಗ್ಗ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ 14 ಕಲ್ಯಾಣ ಸಂಘಟಿಕರು ‘ಸಿ’ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆಯುಳ್ಳ ಭೂಸೇನೆಯ ಜೆ.ಸಿ.ಓ ರ್ಯಾಂಕ್ ಹಾಗೂ ವಾಯುಪಡೆ ಮತ್ತು ನೌಕಾಪಡೆಯ ತತ್ಸಮಾನವಾದ ರ್ಯಾಂಕ್‍ನಿಂದ ಸೇವಾ ನಿವೃತ್ತಿ ಹೊಂದಿರುವ ಮಾಜಿ ಸೈನಿಕರು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ 20 ದಿನದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಅಧಿಸೂಚನೆ ಸಂಖ್ಯೆ ಸೈಕಪುಇ/ಸಿಬ್ಬಂದಿ/134/ಗ್ರೂಪ್ ಸಿ/2023 ದಿನಾಂಕ 13 ಜುಲೈ 2023 ಹಾಗೂ ಕರ್ನಾಟಕ ರಾಜ್ಯ ಪತ್ರ ದಿನಾಂಕ 18 ಜುಲೈ 2023ರ ಸಂಚಿಕೆ-140ರ ಭಾಗ-5ರಲ್ಲಿ ಪ್ರಕಟಿಸಲಾದ ಪ್ರಕಟಣೆಯನ್ನು ಅನುಸರಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂರವಾಣಿ ಸಂಖ್ಯೆ 080-25589459 ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಮನರ್ವಸತಿ ಇಲಾಖೆ ಉಪ ನಿರ್ದೇಶಕರು ಡಾ.ಹಿರೇಮಠ ತಿಳಿಸಿದ್ದಾರೆ.