ಅಭಿರಕ್ಷಕರ-02 ಹುದ್ದೆಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪತ್ರದ ಅನ್ವಯ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಕಾನೂನು ನೆರವು ಅಭಿರಕ್ಷಕರ ಕಚೇರಿಗೆ ಒಪ್ಪಂದದ ಮೇರೆಗೆ ಕೆಲಸ ನಿರ್ವಹಿಸಲು ಉಪ ಮುಖ್ಯ ಕಾನೂನು ನೆರವು ಅಭಿರಕ್ಷಕರ-02 ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಏ.27ರಿಂದ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಮೇ.08 ರಂದು ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕಡೆಯ ದಿನಾಂಕವಾಗಿದ್ದು ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬಹುದಾಗಿರುತ್ತದೆ, ನಂತರ ಅಥವಾ ತಡವಾಗಿ ಬರುವ ಹಾಗೂ ಅಪೂರ್ಣ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಕನಿಷ್ಠ ಅರ್ಹತೆಗಳು: ಕ್ರಿಮಿನಲ್ ವಿಭಾಗದಲ್ಲಿ ಕನಿಷ್ಠ 7 ವರ್ಷಗಳ ವೃತ್ತಿ ಅನುಭವವಿರಬೇಕು. ಕ್ರಿಮಿನಲ್ ಕಾನೂನಿನ ಬಗ್ಗೆ ಉತ್ತಮ ಜ್ಞಾನವಿರಬೇಕು, ಉತ್ತಮವಾದ ಮೌಖಿಕ ಮತ್ತು ಬರವಣಿಗೆಯ ಸಂವಹನ ಕೌಶಲ್ಯವಿರಬೇಕು, ಕಾನೂನಿನ ಬಗ್ಗೆ ಸಂಶೋಧನಾ ಕೌಶಲ್ಯವಿರಬೇಕು, ಕಾನೂನು ನೆರವು ಅಭಿರಕ್ಷಕರ ಕರ್ತವ್ಯದ ನಿಯಮಗಳ ಬಗ್ಗೆ ಜ್ಞಾನವಿರಬೇಕು, ಪರಿಣಾಮಕಾರಿ ಮತ್ತು ದಕ್ಷತೆಯಿಂದ ಕೂಡಿದ ಕೆಲಸ ನಿರ್ವಹಿಸುವ ಸಾಮರ್ಥ್ಯವಿರಬೇಕು, ಸೆಷನ್ಸ್ ನ್ಯಾಯಾಲಯಗಳಲ್ಲಿ ಕನಿಷ್ಠ 20 ಪ್ರಕರಣಗಳನ್ನು ಕಡ್ಡಾಯವಾಗಿ ನಡೆಸಿರಬೇಕು, ಸದರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಕೀಲರ ಹೆಸರಿನಲ್ಲಿಯೇ ಪ್ರಕರಣಗಳನ್ನು ನಡೆಸಿರಬೇಕು, ವೃತ್ತಿಗೆ ಅವಶ್ಯವಿರುವ ಮಾಹಿತಿ ತಂತ್ರಜ್ಞಾನದ ತಿಳಿವಳಿಕೆ ಇರಬೇಕು, ವೇತನ-ರೂ 45,000.

ಅರ್ಜಿಗಳನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಪಡೆದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ, ಹೆಚ್ಚಿನ ಮಾಹಿತಿಗಾಗಿ ಹಾಸನದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಛೇರಿಯನ್ನು ಸಂಪರ್ಕಿಸಬಹುದಾಗಿರುತ್ತದೆ ಎಂದು ಹಾಸನ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon