ಬೆಂಗಳೂರು: ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯು ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಒಟ್ಟು 800 ಸ್ಥಾನಗಳ ಭರ್ತಿಗೆ ಗುತ್ತಿಗೆ ಆಧಾರದ ನೇಮಕಾತಿಗೆ ಅನುಮತಿ ನೀಡಿದೆ.
ಈ ನೇಮಕಾತಿಯ ಅಡಿಯಲ್ಲಿ 400 ಕಿರಿಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳು ಹಾಗೂ ಫಾರ್ಮಸಿ ಅಧಿಕಾರಿಗಳ (ಫಾರ್ಮಾಸಿಸ್ಟ್) 400 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.
D.Pharma ಅಥವಾ DMLT ವಿದ್ಯಾರ್ಹತೆ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ನೇರ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.
































