ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಸೀಟುಗಳಿಗೆ ಹಾಸ್ಟೆಲ್ ಗಳ ಅನುಸಾರ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು, ಮತ್ತು ಸ್ನಾತಕೊತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಉಚಿತ ಪ್ರವೇಶಾಕ್ಕಾಗಿ ಉಳಿಕೆ ಸೀಟು ಅನುಸಾರ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್, ಪಾರ್ಸಿ, ಇತರೆ ವರ್ಗದ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು 2025 ರ ಜನವರಿ 10 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು https://shp.karnataka.gov.in ವೆಬ್ಸೈಟ್ ನಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಅನ್ನು ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.