ಚಿತ್ರದುರ್ಗ: 2023-24ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಬರುವ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ 6, 7 ಮತ್ತು 8ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅರ್ಜಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯ ವೆಬ್‍ಸೈಟ್ https://dom.karnataka.gov.in/chitradurga/public/ ಮೂಲಕ ಸಲ್ಲಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.