ದಾವಣಗೆರೆ : ಪ್ರಸಕ್ತ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 20 ಕೊನೆಯದಿನವಾಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರವನ್ನು ಇಲಾಖೆಯ ವೆಬ್ ಸೈಟ್ http://bcwd.karnataka.gov.in ಹಾಗೂ [email protected] ನೋಡಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050770004 ಮತ್ತು 8050770005 ನ್ನು ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
( AI ಚಿತ್ರ)

































