ದಾವಣಗೆರೆ : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‍ಲೈನ್ https://shp.karnataka.gov.in ನಲ್ಲಿ ಜನವರಿ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿನಿಲಯಗಳ ವಿವರ : ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕುಂದುವಾಡರಸ್ತೆ, ದಾವಣಗೆರೆ. 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಶಿವಕುಮಾರ್ ಸ್ವಾಮಿ ಬಡಾವಣೆ, ದಾವಣಗೆರೆ 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಗುತ್ತೂರು ಕಾಲೋನಿ, ಹರಿಹರ, ದಾವಣಗೆರೆ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಕೆರೆಬಿಳಚಿ, ದಾವಣಗೆರೆ, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಜಗಳೂರು ಟೌನ್, ದಾವಣಗೆರೆ ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ, ಎಂ.ಸಿ,ಸಿ ಬಿ ಬ್ಲಾಕ್, ದಾವಣಗೆರೆ. 1 & 2, ಅಲ್ಪಸಂಖ್ಯಾತರ ಮೆಟ್ರಿಕ್ ನಂತರ ಬಾಲಕ ವಿದ್ಯಾರ್ಥಿನಿಲಯ, ಕೆ.ಟಿ.ಜೆ ನಗರ, ದಾವಣಗೆರೆ 1 & 2
ಹೆಚ್ಚಿನ ಮಾಹಿತಿಗಾಗಿ ದೂ.ಸಂ :08192-250022 ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಛೇರಿ ದೂರವಾಣಿ : 08192-250066 ಸಂಪರ್ಕಿಸಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.